Mysore
25
broken clouds

Social Media

ಬುಧವಾರ, 05 ಆಗಸ್ಟ್ 2026
Light
Dark

Covid-19: ಇಂದು 12,591 ಪ್ರಕರಣ: 40 ಸಾವು

ನವದೆಹಲಿ: ಕಳೆದ ಒಂದು ದಿನದ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 12,591 ಹೊಸ ಕೋವಿಡ್‌ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ.

ಎಂಟು ತಿಂಗಳಲ್ಲೇ ದಿನವೊಂದರಲ್ಲಿ ಪತ್ತೆಯಾದ ಗರಿಷ್ಠ ಪ್ರಕರಣಗಳಿವು. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 65,286 ಕ್ಕೆ ಏರಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳಿಂದ ತಿಳಿದು ಬಂದಿದೆ.

24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ಕಾರಣದಿಂದ 40 ಸಾವುಗಳೂ ಸಂಭವಿಸಿವೆ. ಕೇರಳವೊಂದರಲ್ಲೇ 11 ಸಾವಾಗಿದೆ. ಈವರೆಗೆ ಮೃತಪಟ್ಟವರ ಸಂಖ್ಯೆ 5,31,230ಕ್ಕೆ ಏರಿದೆ.

ದೇಶದಲ್ಲಿ ಇಲ್ಲಿಯ ವರೆಗೆ ಪತ್ತೆಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 4.48 ಕೋಟಿಗೆ ಏರಿದೆ.

ರಾಷ್ಟ್ರವ್ಯಾಪಿ ಕೋವಿಡ್‌ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.66 ಕೋಟಿ ಡೋಸ್‌ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!