Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಚಾಮರಾಜನಗರ| ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಜೆಎಸ್ ಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಮೃತಳು.

ಪಿಸಿಎಂಸಿ ವಿಷಯ ತೆಗೆದುಕೊಂಡಿದ್ದ ಈ ವಿದ್ಯಾರ್ಥಿನಿ ಫಲಿತಾಂಶದಲ್ಲಿ ಫೇಲಾದ ವಿಷಯ ತಿಳಿದು, ನಗರದ ಜೆಎಸ್ ಎಸ್ ಹಾಸ್ಟೆಲ್ ನ ರೂಂ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈಕೆ ಗುಂಡ್ಲುಪೇಟೆ ತಾಲೂಕಿನ ಮೂಡುಗೂರು ಗ್ರಾಮದ ಮಹೇಶ್ ಎಂಬುವರ ಪುತ್ರಿ. ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!