Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಂಡ್ಯ ಚುನಾವಣಾ ಅಖಾಡಕ್ಕೆ ಸ್ಯಾಂಡಲ್​ವುಡ್​ ಕ್ವೀನ್​ ರೀ ಎಂಟ್ರಿ : ಪ್ರಿಯಾಂಕಾ ಗಾಂಧಿಗೆ ರಮ್ಯಾ ಸಾಥ್​

ಮಂಡ್ಯ : ಸಕ್ಕರೆ ನಾಡು ಮಂಡ್ಯ ಚುನಾವಣಾ ಅಖಾಡಕ್ಕೆ ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಮರು ಪ್ರವೇಶ ಮಾಡಲಿದ್ದಾರೆ. ಹಲವು ವರ್ಷಗಳ ಬಳಿಕ ಮಂಡ್ಯ ರಾಜಕೀಯಕ್ಕೆ ಮತ್ತೆ ಕಾಲಿಡುತ್ತಿರುವ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಅವರ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ.
ಮಂಡ್ಯಕ್ಕೆ ಬರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಮಾಹಿತಿ ಹಂಚಿಕೊಂಡಿದ್ದಾರೆ. ನಾಳೆ ನಾನು ಕಾಂಗ್ರೆಸ್ಸಿನ ವಿಧಾನಸಭಾ ಅಭ್ಯರ್ಥಿಗಳ ಪರವಾಗಿ ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ನಾಯಕರೊಂದಿಗೆ ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದೇನೆ. ನಿಮ್ಮೆಲ್ಲರನ್ನೂ ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಎಂದು ರಮ್ಯಾ ಟ್ವೀಟ್​ ಮಾಡಿದ್ದಾರೆ.

ಮಂಡ್ಯದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ನಡೆಯುವ ಪ್ರಚಾರ ಸಭೆಯಲ್ಲಿ ರಮ್ಯಾ ಭಾಗಿಯಾಗಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ರಮ್ಯಾ ಚೊಚ್ಚಲ ಬಾರಿಗೆ ಸಂಸದೆಯಾಗಿದ್ದರು. ತಮಗೆ ಸಿಕ್ಕ 6 ತಿಂಗಳ ಅವಧಿಯಲ್ಲೇ ಉತ್ತಮ ಕೆಲಸಗಳಿಂದ ಸೈ ಅನಿಸಿಕೊಂಡಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ರಮ್ಯಾ ಸೋಲಿಗೆ ಸ್ವಪಕ್ಷೀಯರೇ ಕಾರಣವಾಗಿದ್ದರು.

ಇದೀಗ ರಮ್ಯಾ ಅವರು ಮಂಡ್ಯ ಚುನಾವಣಾ ಅಖಾಡಕ್ಕೆ ಮರು ಪ್ರವೇಶ ಮಾಡುತ್ತಿರುವುದರಿಂದ ಮಂಡ್ಯದಲ್ಲಿ ಚುನಾವಣಾ ಕಾವು ಇನ್ನಷ್ಟು ಜೋರಾಗಲಿದೆ. ಇನ್ನೊಂದೆಡೆ ಬಿಜೆಪಿ ಪರ ಸಂಸದೆ ಸುಮಲತಾ ಅಂಬರೀಷ್​ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!