Mysore
22
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಅನಿವಾಸಿ ಭಾರತೀಯರು ಮತದಾನ ಮಾಡುವಂತಿಲ್ಲ: ಹೈಕೋರ್ಟ್‌

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಮತ್ತು ಸಾಗರೋತ್ತರ ಕನ್ನಡಿಗರ ಸಂಘದ ಜಂಟಿ ಕಾರ್ಯದರ್ಶಿ ಎಂ.ರವಿ ಅವರು ಸಲ್ಲಿಸಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಮತ್ತು ನ್ಯಾಯಮೂರ್ತಿ ವಿಜಯ್‌ಕುಮಾರ್‌ ಎ.ಪಾಟೀಲ್‌ ಇದ್ದ ರಜಾ ಕಾಲದ ಪೀಠದಿಂದ ಪಿಐಎಲ್‌ ವಜಾಗೊಳಿಸಿ ಆದೇಶ ನೀಡಲಾಗಿದೆ.

ಆಯೋಗದ ಪರ ವಕೀಲರು ವಾದ ಮಂಡಿಸಿ, ಮತದಾನದ ಹಕ್ಕು ಮೂಲ ಹಕ್ಕಲ್ಲ. ಅದು ಕಾನೂನಿನ ಅನುಪಸ್ಥಿತಿಯಲ್ಲಿ ಅವರು ಮತದಾನ ಹಕ್ಕು ಪಡೆದುಕೊಳ್ಳಲು ಆಗುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಇದನ್ನು ಪರಿಗಣಿಸಿದ ನ್ಯಾಯಪೀಠ ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ನೀಡಬೇಕು ಎನ್ನುವುದು ದೀರ್ಘಕಾಲದ ಚುನಾವಣಾ ನ್ಯಾಯಾಶಾಸ್ತ್ರಕ್ಕೆ ವಿರುದ್ಧವಾಗಿದ್ದು, ಹೀಗಾಗಿ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!