Mysore
25
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಮೈಸೂರು ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕುಮಾರ್ ಅವರು ಚಿಕಿತ್ಸೆ ಫಲಿಸದೆ ಶುಕ್ರವಾರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕಳೆದ ಸೋಮವಾರ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿತ್ತು. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!