Mysore
24
haze

Social Media

ಶುಕ್ರವಾರ, 30 ಜನವರಿ 2026
Light
Dark

ವಿದ್ಯುತ್ ತಂತಿ ತುಳಿದು ರೈತ ಮತ್ತು ಎತ್ತು ಸಾವು

ಮದ್ದೂರು : ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಜಾನುವಾರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಳ್ಳನ ದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ.

ತಾಲ್ಲೂಕಿನ ಮಾಲಗಾರನಹಳ್ಳಿ ಗ್ರಾಮದ ಮುತ್ತುರಾಜ್ ಮೃತಪಟ್ಟ ರೈತನಾಗಿದ್ದು, ಮೃತನು ಬುಳ್ಳನದೊಡ್ಡಿ ಗ್ರಾಮದಲ್ಲಿ ತನ್ನ ಮಾವನ ಜಮೀನನ್ನು ಉಳುಮೆ ಮಾಡುತ್ತಿದ್ದ ವೇಳೆ ಕೃಷಿ ಪಂಪ್‌ಸೆಟ್‌ನ ವಿದ್ಯುತ್ ತಂತಿಯನ್ನು ತುಳಿದ ಕ್ಷಣವೇ ಎತ್ತು ಸ್ಥಳದಲ್ಲೇ ಮೃತಪಟ್ಟಿದ್ದು, ತೀರ್ವವಾಗಿ ಅಸ್ವಸ್ಥಗೊಂಡಿದ್ದ ಮುತ್ತುರಾಜ್ ಅವರನ್ನು ಚಿಕಿತ್ಸೆಗಾಗಿ ಕೆ.ಹೊನ್ನಲಗೆರೆ ಪ್ರಾಥಮಿಕ ಆಸ್ಪತ್ರೆಗೆ ಕರೆತಂದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಮುತ್ತುರಾಜ್‌ಗೆ ಪತ್ನಿ ರುಕ್ಮಿಣಿ, ಓರ್ವ ಪುತ್ರ ಹಾಗೂ ಪುತ್ರಿಯಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈಯಕ್ತಿಕ ಆರ್ಥಿಕ ಸಹಾಯ : ಕದಲೂರು ಉದಯ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೃತಪಟ್ಟ ಮುತ್ತುರಾಜ್ ಕುಟುಂಬಕ್ಕೆ ಕೆ.ಎಂ.ರವಿ ಸಾಂತ್ವನ ಹೇಳಿ ಧನ ಸಹಾಯ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!