Mysore
26
scattered clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್ ಕೌಂಟರ್: 5 ವಿದೇಶಿ ಉಗ್ರರ ಹತ್ಯೆ

ಜಮ್ಮು-ಕಾಶ್ಮೀರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ. ಎಲ್‌ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳು ನಿರ್ದಿಷ್ಟ ಮಾಹಿತಿ ಪಡೆದ ನಂತರ ಎನ್‌ಕೌಂಟರ್ ನಡೆಯಿತು.

https://twitter.com/PTI_News/status/1669576934538326017?s=20

 

ಕುಪ್ವಾರಾ ಜಿಲ್ಲೆಯ ಎಲ್‌ಒಸಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನಗಳ ಬಗ್ಗೆ ಪೊಲೀಸರು ಮತ್ತು ಸೇನಾಪಡೆ ಯೋಧರು ನಿರ್ದಿಷ್ಟ ಮಾಹಿತಿ ಪಡೆದರು. ಭಯೋತ್ಪಾದಕರ ಇರುವಿಕೆಯನ್ನು ಖಚಿತಪಡಿಸಿಕೊಂಡು ಶರಣಾಗಲು ಸೂಚಿಸಿದಾಗ ಎನ್ ಕೌಂಟರ್ ನಡೆಯಿತು.

ಜೂನ್ 13 ರಂದು ಕುಪ್ವಾರದ ಎಲ್‌ಒಸಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು. ಕುಪ್ವಾರಾ ಜಿಲ್ಲೆಯ ದೋಬನಾರ್ ಮಚ್ಚಲ್ ಪ್ರದೇಶದಲ್ಲಿ (LOC) ಸೇನೆ ಮತ್ತು ಕುಪ್ವಾರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಮಾಡಲಾಗಿದೆ. ಶೋಧ ಇನ್ನೂ ಮುಂದುವರೆದಿದೆ ಎಂದು ಅದು ಟ್ವೀಟ್ ಮಾಡಿದೆ.

ಈ ತಿಂಗಳ ಆರಂಭದಲ್ಲಿ, ಜೂನ್ 2 ರಂದು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರರನ್ನು ಕೊಲ್ಲಲಾಗಿದೆ. ರಜೌರಿ ಬಳಿಯ ದಸ್ಸಾಲ್ ಗುಜ್ರಾನ್ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ನಂತರ ಸೇನೆ ಮತ್ತು ಪೊಲೀಸರು ಜಂಟಿಯಾಗಿ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಯೋತ್ಪಾದಕರು ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ