ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿದೆ.
ಏರ್ಪೋಟ್ನಲ್ಲಿ ಬಸ್ ಅಪಘಾತವಾಗಿದ್ದು 25 ಕ್ಕೂ ಅಧಿಕ ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಟರ್ಮಿನಲ್ 2 ರಿಂದ ಟರ್ಮಿನಲ್ 1 ಕ್ಕೆ ತೆರಳುವ ಶೆಟಲ್ ಬಸ್, ಇಂದು(ಜೂನ್ 18) ಬೆಳಗ್ಗೆ T2 ಯಿಂದ ಪ್ರಯಾಣಿಕರನ್ನ ಕರೆದೋಗುತ್ತಿತ್ತು. ಈ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಏರ್ಪೋಟ್ನ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.