ಇಂಫಾಲ: ರಾಜ್ಯದಲ್ಲಿ ಹಿಂಸಾಚಾರವನ್ನು ನಿಲ್ಲಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸೋಮವಾರ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಭಾನುವಾರ ರಾತ್ರಿ ಇಂಫಾಲ್ ವೆಸ್ಟ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ನಂತರ ಸೇನಾ ಯೋಧನಿಗೆ ಉಂಟಾದ ಗಾಯದ ಕುರಿತು ಅವರು ಪ್ರತಿಕ್ರಿಯಿಸಿ, ಹಿಂಸೆಯನ್ನು ನಿಲ್ಲಿಸಿ. ಇಲ್ಲದಿದ್ದರೆ, ಅವರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾನು ಜನರಿಗೆ ಮನವಿ ಮಾಡುತ್ತೇನೆ. ಶಸ್ತ್ರಾಸ್ತ್ರ ಹೊಂದಿರುವ ಮೈತೇಯ್ ಜನರು ಯಾವುದರ ಮೇಲೂ ದಾಳಿ ಮಾಡಬೇಡಿ ಮತ್ತು ಶಾಂತಿಯನ್ನು ಕಾಪಾಡಿ ಇದರಿಂದ ನಾವು ರಾಜ್ಯದಲ್ಲಿ ಸಹಜತೆಯನ್ನು ಪುನಃಸ್ಥಾಪಿಸಬಹುದು ”ಎಂದರು.
ಒಂದು ತಿಂಗಳ ಹಿಂದೆ ಮಣಿಪುರದಲ್ಲಿ ಮೈತೇಯ್ ಮತ್ತು ಕುಕಿ ಸಮುದಾಯದ ಜನರ ನಡುವೆ ಆರಂಭವಾದ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.