Mysore
13
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ: ಸಂಸದ, ಶಾಸಕರ ನ್ಯಾಯಾಲಯಕ್ಕೆ ವರ್ಗಾವಣೆ

ನವದೆಹಲಿ: ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ದೆಹಲಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಸಿಎಂಎಂ) ಗುರುವಾರ ಸಿಟಿ ಕೋರ್ಟ್ ಗೆ ವರ್ಗಾಯಿಸಿದ್ದಾರೆ.

ಸಿಎಮ್‌ಎಂ ಮಹಿಮಾ ರಾಯ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣವನ್ನು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಎಸಿಎಂಎಂ) ಹರ್ಜೀತ್ ಸಿಂಗ್ ಜಸ್ಪಾಲ್ ಅವರಿಗೆ ವಹಿಸಿದ್ದಾರೆ.

ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಸಂಸದರು ಮತ್ತು ಶಾಸಕರ ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸುತ್ತಾರೆ. ಪ್ರಕರಣದ ವಿಚಾರಣೆಯನ್ನು ಈಗ ಜೂನ್ 27ಕ್ಕೆ ಪಟ್ಟಿ ಮಾಡಲಾಗಿದೆ.

ಕಳೆದ ವಾರ, ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಮತ್ತು ಮಾಜಿ ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧ 1,000 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!