Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು : ಹೊರಬರಲಾರದೆ ಚಾಲಕ ಸಜೀವದಹನ

ಚಾಮರಾಜನಗರ : ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಹೊರ ಬರಲಾರದೆ ಸಜೀವ ದಹನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ದುರ್ಘಟನೆ ನಡೆದಿದೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಮೈಸೂರು ಮೂಲದ ಮುಜಾಮಿಲ್ ಅಹಮದ್ ಎಂದು ಗುರುತಿಸಲಾಗಿದೆ.

ಕಳೆದ ಒಂದು ವಾರದ ಹಿಂದೆ ಪಾರ್ವತಮ್ಮ ರಾಜ್‌ಕುಮಾರ್ ತಮ್ಮನ ಪುತ್ರ ಸೂರಜ್‌ಗೆ ಅಪಘಾತವಾಗಿದ್ದ ಸಮೀಪದ ಸ್ಥಳದಲ್ಲೇ ಮತ್ತೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಸ್ಥಳಕ್ಕೆ ಚಾಮರಾಜನಗರ ಎಸ್‌ಪಿ ಪದ್ಮಿನಿ ಸಾಹು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಗೂರು ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!