Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಪ್ರಧಾನಿ ಮೋದಿ ನಿವಾಸದ ಮೇಲೆ ಶಂಕಾಸ್ಪದ ಡ್ರೋಣ್ ಹಾರಾಟ : ಸಂಚಿನ ಶಂಕೆ

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಶಂಕಾಸ್ಪದವಾಗಿ ಡ್ರೋಣ್ ಹಾರಾಟ ನಡೆಸಿದ್ದು, ಈ ಸಂಬಂಧ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿಗಳ ನಿವಾಸದ ಮೇಲೆ ಡ್ರೋಣ್ ಹಾರಾಟ ನಡೆಸಿರುವುದನ್ನು ಮೋದಿ ಭದ್ರತೆಗಾಗಿ ನಿಯೋಜನೆಗೊಂಡಿರುವ ವಿಶೇಷ ರಕ್ಷಣಾ ದಳದ ಅಧಿಕಾರಿಗಳು ಗಮನಿಸಿದ್ದಾರೆ.

ಕೂಡಲೇ ದೆಹಲಿ ಪೊಲೀಸರು ಶೋಧಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ, ಈ ವರೆಗೆ ಯಾವುದೇ ಡ್ರೋಣ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸವು ನೋ ಫ್ಲೈ ಝೋನ್ ಅಥವಾ ಡ್ರೋಣ್ ಝೋನ್ ಅಡಿಯಲ್ಲಿ ಬರುತ್ತದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!