Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ನಾಲ್ಕನೇ ದಿನವೂ ಏರಿಕೆ ಕಂಡ ಷೇರುಪೇಟೆ ಸೂಚ್ಯಂಕ

ಮುಂಬೈ : ಷೇರು ಮಾರುಕಟ್ಟೆಯಲ್ಲಿ ಸತತ ನಾಲ್ಕನೇ ದಿನವೂ ಏರಿಕೆ ಮುಂದುವರೆದಿದ್ದು ಮುಂಬೈ ಷೇರುಪೇಟೆ ಸೂಚ್ಯಂಕ(ಬಿಎಸ್‌ಇ) ಸೆನ್ಸೆಕ್ಸ್ 449 ಅಂಕಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟ 65,000ಕ್ಕೆ ತಲುಪಿದೆ.

30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 449.46 ಪಾಯಿಂಟ್‌ಗಳ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 65,168.02 ತಲುಪಿದೆ. ಎನ್‌ಎಸ್‌ಇ ನಿಫ್ಟಿ 128.95 ಪಾಯಿಂಟ್‌ಗಳ ಏರಿಕೆ ಕಂಡು ತನ್ನ ಜೀವಮಾನದ ಗರಿಷ್ಠ 19,318ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ವಹಿವಾಟು ಮತ್ತು ವಿದೇಶಿ ಬಂಡವಾಳದ ಒಳಹರಿವಿನ ಪ್ರಭಾವದಿಂದ ಈ ಏರಿಕೆ ಕಂಡುಬಂದಿದೆ.

ಸೆನ್ಸೆಕ್ಸ್ ಪ್ಯಾಕ್‌ನಿಂದ, ಎಚ್‌ಡಿಎಫ್‌ಸಿ, ಎಚ್‌ಡಿಎಫ್‌ಸಿ ಬ್ಯಾಂಕ್, ಮಹೀಂದ್ರಾ ಮತ್ತು ಮಹೀಂದ್ರಾ, ಅಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಫಿನ್‌ಸರ್ವ್ ಮತ್ತು ಐಸಿಐಸಿಐ ಬ್ಯಾಂಕ್ ಪ್ರಮುಖ ಲಾಭ ಗಳಿಸಿದ ಸಂಸ್ಥೆಗಳಾದರೆ,

ಪವರ್ ಗ್ರಿಡ್, ಮಾರುತಿ, ಟೆಕ್ ಮಹೀಂದ್ರಾ, ಇಂಡಸ್‌ಇಂಡ್ ಬ್ಯಾಂಕ್, ಎಚ್‌ಸಿಎಲ್ ಟೆಕ್ನಾಲಜೀಸ್ ಮತ್ತು ಆಕ್ಸಿಸ್ ಬ್ಯಾಂಕ್ ನಷ್ಟ ಅನುಭವಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ