Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಕಾಂಗ್ರೆಸ್ ಗ್ಯಾರೆಂಟಿ ಮೇಲಿನ ಚರ್ಚೆಗೆ ಸಮಯ ನಿಗದಿ: ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ

ಬೆಂಗಳೂರು: ಕಾಂಗ್ರೆಸ್‌ನ ಐದು ‘ಖಾತರಿ’ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.

ಕಾಂಗ್ರೆಸ್‌ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ನೋಟಿಸ್ ನೀಡಿದ್ದೇವೆ. ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ ಆಗ್ರಹಿಸಿದರು.

ನಿಯಮಗಳ ಪ್ರಕಾರ, ಪ್ರಶ್ನೋತ್ತರ, ಶೂನ್ಯವೇಳೆಯ ಬಳಿಕವೇ ಚರ್ಚೆಗೆ ಅವಕಾಶ ನೀಡಲು ಸಾಧ್ಯ. ಪ್ರಶ್ನೋತ್ತರಕ್ಕೆ ಸಹಕರಿಸಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಇದು ಮಂಗಳವಾರ ಕಲಾಪಕ್ಕೆ ಅಡ್ಡಿಯುಂಟಾಯಿತು. ಅಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಕೋಲಾಹಲಕ್ಕೆ ಕಾರಣವಾಯಿತು.

ಇಂದು ಬೆಳಗ್ಗೆ ಕಲಾಪ ಆರಂಭವಾದ ಕೂಡಲೇ ಬಿಜೆಪಿ ಶಾಸಕರು ಈ ವಿಷಯದ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದರು.
ಬಳಿಕ ಶೂನ್ಯವೇಳೆ ನಂತರ ಸಮಯಾವಕಾಶ ನೀಡಲು ಸ್ಪೀಕರ್ ಯುಟಿ ಖಾದರ್ ಒಪ್ಪಿಗೆ ಸೂಚಿಸಿದ ಬಳಿಕ ಬಿಜೆಪಿ ಪ್ರತಿಭಟನೆ ಹಿಂಪಡೆದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ