Mysore
29
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಪ್ರಧಾನಿ ರ‍್ಯಾಲಿಗೆ ಹೊರಟಿದ್ದ ಬಸ್ ಅಪಘಾತ : ಮೂವರ ದುರ್ಮರಣ

ಬಿಲಾಸ್‌ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಯಪುರದ ರ್‍ಯಾಲಿಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಸುಮಾರು 40 ಜನರಿದ್ದ ಬಸ್ ಅಂಬಿಕಾಪುರದಿಂದ ರಾಯಪುರಕ್ಕೆ ತೆರಳುತ್ತಿದ್ದಾಗ ಬೆಲ್ಟಾರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರೀ ಮಳೆಯಿಂದಾಗಿ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್, ಬಸ್ ಚಾಲಕನಿಗೆ ಸ್ಪಷ್ಟವಾಗಿ ಗೋಚರಿಸದ ಕಾರಣ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಮೃತರನ್ನು ಸೂರಜ್‌ಪುರ ಜಿಲ್ಲೆಯ ಸಜನ್ (30), ರುಕ್‌ದೇವ್ (45) ಮತ್ತು ಬಸ್ ಚಾಲಕ ಬಲರಾಮ್‌ಪುರ ಜಿಲ್ಲೆಯ ನಿವಾಸಿ ಅಕ್ರಂ ರಾಜಾ (28) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸೂರಜ್‌ಪುರದ ಬಿಜೆಪಿಯ ಲಾಟೋರಿ ಘಟಕದ ಮಂಡಲ ಅಧ್ಯಕ್ಷ ಲಿಲು ಗುಪ್ತಾ ಮತ್ತು ಸೂರಜ್‌ಪುರದ ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿ ವಿಶಂಭರ್ ಯಾದವ್ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬಿಲಾಸ್‌ಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಈ ನಡುವೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಪ್ರತಿ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!