Mysore
18
mist

Social Media

ಸೋಮವಾರ, 15 ಡಿಸೆಂಬರ್ 2025
Light
Dark

ರಾಜ್ಯಪಾಲರು ಕೋಮುದ್ವೇಷ ಕೆರಳಿಸುತ್ತಿದ್ದಾರೆ : ರಾಷ್ಟ್ರಪತಿಗೆ ಸ್ಟಾಲಿನ್ ದೂರು

ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ ಎಂದು ಸರಕಾರ ಭಾನುವಾರ ತಿಳಿಸಿದೆ.

ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ರವಿ ಅವರು ಸಂವಿಧಾನದ 159 ನೇ ವಿಧಿಯ ಅಡಿಯಲ್ಲಿ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ಸರಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

”ರವಿ ಕೋಮು ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ,” ಎಂದು ಜುಲೈ 8, 2023 ರಂದು ಬರೆದ ಪತ್ರದಲ್ಲಿ ಸ್ಟಾಲಿನ್ ಹೇಳಿದ್ದಾರೆ.

ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲರ ಕ್ರಮದ ಬಗ್ಗೆ ನಂತರ ಅವರು ಹಿಂದೆ ಸರಿದಿದ ಬಗ್ಗೆ ಹೇಳಿಕೊಂಡಿದ್ದಾರೆ. ರವಿ ಅವರು ತಮ್ಮ ರಾಜಕೀಯ ಒಲವನ್ನು ತೋರಿಸಿದ್ದಾರೆ ಎಂದು ಸಿಎಂ ಪತ್ರದಲ್ಲಿ ಹೇಳಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!