Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ದೆಹಲಿಯಲ್ಲಿ ಮಳೆ: ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆ ರದ್ದುಗೊಳಿಸಿದ ಕೇಜ್ರಿವಾಲ್!

ನವದೆಹಲಿ: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿದ್ದಾರೆ ಮತ್ತು ಕೆಲದಲ್ಲಿ ತೊಡಗುವಂತೆ ಸೂಚನೆ ನೀಡಿದ್ದಾರೆ.

ದೆಹಲಿ ಕ್ಯಾಬಿನೆಟ್ ಸಚಿವರು ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಅವರು ನಗರದಲ್ಲಿ ಮಳೆಯಿಂದಾಗಿ ಸಮಸ್ಯೆಗೆ ತುತ್ತಾದ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ ಎಂದು ಅವರು ಹೇಳಿದರು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ‘ನಿನ್ನೆ ದೆಹಲಿಯಲ್ಲಿ 126 ಮಿ.ಮೀ ಮಳೆಯಾಗಿದೆ. ದೆಹಲಿಯಲ್ಲಿ ಪ್ರತಿ ಮುಂಗಾರಿನಲ್ಲಿ ಬೀಳುವ ಒಟ್ಟು ಶೇ 15 ರಷ್ಟು ಮಳೆ ಕೇವಲ 12 ಗಂಟೆಗಳಲ್ಲಿಯೇ ಸುರಿದಿದೆ. ಜಲಾವೃತದಿಂದಾಗಿ ಜನರು ತೀವ್ರ ತೊಂದರೆಗೀಡಾಗಿದ್ದಾರೆ’ ಎಂದಿದ್ದಾರೆ.

‘ಇಂದು, ದೆಹಲಿಯ ಎಲ್ಲಾ ಸಚಿವರು ಮತ್ತು ಮೇಯರ್ ಪ್ರದೇಶಗಳಿಗೆ ತೆರಳಿ ಮಳೆಯಿಂದಾಗಿ ಉಂಟಾಗಿರುವ ಸಮಸ್ಯೆಗಳ ಪರಿಶೀಲನೆ ನಡೆಸಲಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಕೆಲಸದಲ್ಲಿ ತೊಡಗಿಕೊಳ್ಳುವಂತೆ ನಿರ್ದೇಶನಗಳನ್ನು ನೀಡಲಾಗಿದೆ ಮತ್ತು ಅವರ ಭಾನುವಾರದ ರಜೆಯನ್ನು ರದ್ದುಗೊಳಿಸಲಾಗಿದೆ’ ಎಂದು ಅವರು ಹೇಳಿದರು.

ಭಾನುವಾರದಂದು 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ದಾಖಲೆಯ 153 ಮಿಮೀ ಮಳೆ ಸುರಿದಿದೆ. ಇದು 1982 ರಿಂದೀಚೆಗೆ ಜುಲೈ ತಿಂಗಳಿನ ಒಂದೇ ದಿನದಲ್ಲಿ ಸುರಿದ ಅತಿಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ನಗರದ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 153 ಮಿಮೀ ಮಳೆ ಸುರಿದಿದೆ. ಜುಲೈ 25, 1982 ರಂದು 24 ಗಂಟೆಗಳಲ್ಲಿ ಸುರಿದ 169.9 ಮಿಮೀ ಮಳೆಯ ನಂತರ ಇದು ಅತಿ ಹೆಚ್ಚು ಎಂದು ಐಎಂಡಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ