Mysore
29
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ

ಚಾಮರಾಜನಗರ : ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಪೊರಕೆ ಕಡ್ಡಿ ಸಂಗ್ರಹಕ್ಕೆ ಪುತ್ರ ಚಂದ್ರು ಜೊತೆ ಹೋಗಿದ್ದ ಪ್ರಭುಲಿಂಗಸ್ವಾಮಿ ಮೇಲೆ ಕಾಡಾನೆ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಪ್ರಭುಸ್ವಾಮಿ ತನ್ನ ಪುತ್ರ ಚಂದ್ರುವಿನ ಜೊತೆ ಪೊರಕೆ ಕಡ್ಡಿ ಸಂಗ್ರಹಣೆಗಾಗಿ ಮಲೆ ಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ತೆರಳಿದ್ದ. ಈ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತ ದೇಹವನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ, ಅರಣ್ಯ ಇಲಾಖಾ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!