Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಚಿರತೆ ದಾಳಿಗೆ ಬಲಿಯಾದ ಬಾಲಕಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕಿ ಸುಶೀಲಾ ಸಾವು ವಿಚಾರ ಕೇಳಿ ಬೇಸರ ಆಗಿದ್ದು, ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ನೀಡಲು ಸೂಚನೆ ನೀಡಿ, 4 ಸಾವಿರ ಮಾಸಾಶನ ಬರುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟು ಜಾರಿಗೊಳಿಸಲು ಪ್ರಯತ್ನ ಪಡುತ್ತೇನೆ ಎಂದರು.

ಜೂ.26ರ ರಾತ್ರಿ ತಮ್ಮ ಮನೆ ಬಳಿ ಚಿರತೆ ದಾಳಿಗೆ ಸಿಲುಕಿದ್ದ ಬಾಲಕಿಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸುಶೀಲಾ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!