Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಬೆಂ-ಮೈ ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ: ವಿಶೇಷ ಸಮಿತಿ ರಚಿಸಿದ ಹೆದ್ದಾರಿ ಪ್ರಾಧಿಕಾರ

ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ.

ಮೂವರು ತಜ್ಞರನ್ನೊಳಗೊಂಡ ಸಮಿತಿ ಇದಾಗಿದೆ. ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್​ಹೆಚ್​​​ಎಐ ಉಪ ವ್ಯವಸ್ಥಾಪಕ ಪ್ರವೀಣ್‌ ಕುಮಾ‌ರ್, ಜೈವರ್ಧನ್‌ ಸಿಂಗ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್‌ಪ್ರೆಸ್‌ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸಮಿತಿಗೆ ಸೂಚನೆ ನೀಡಿದ್ದಾರೆ.

ಕಳೆದ 9 ತಿಂಗಳಿನಲ್ಲಿ ಎಕ್ಸ್​ಪ್ರೆಸ್​ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ನೀಡುವಂತೆಯೂ ಪ್ರಾಧಿಕಾರ ಆದೇಶಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ