Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಅನಾಥ ಆನೆ ಮರಿಗೆ ಪೋಷಕರಾದ ಕಾವಡಿ ದಂಪತಿ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ ಗಮನ ಸೆಳೆದಿದ್ದಾರೆ.

ಮೂಕ ಪ್ರಾಣಿ ಹಾಗೂ ಮಾನವನ ಬಾಂಧವ್ಯಕ್ಕೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಬಿಡಾರ ಸಾಕ್ಷಿಯಾಗಿದೆ. ಹೆತ್ತ ತಾಯಿಯಿಂದ ಬೇರೆಯಾದ ಮರಿ ಆನೆಗೆ ಕಾವಡಿ ಕುಟುಂಬವೊಂದು ತಂದೆ ತಾಯಿಯಂತೆ ಪೋಷಣೆ ಮಾಡುತ್ತಿದೆ. ಆನೆ ಮರಿ ಹುಟ್ಟಿದ ಏಳೇ ದಿನಕ್ಕೆ ತಾಯಿಯಿಂದ ಬೇರ್ಪಟ್ಟಿದ್ದು ಏಳು ದಿನದ ಮಗುವಿನಿಂದಲೇ ಈ ದಂಪತಿ ಆನೆ ಮರಿಯನ್ನು ಸಾಕುತ್ತಿದ್ದಾರೆ. ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆಗೆ ಕಾವಾಡಿ ರಾಜು ಪೋಷಕರಾಗಿದ್ದಾರೆ. ಹೆತ್ತ ಮಗುವಂತೆ ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಅನಾಥ ಹೆಣ್ಣು ಆನೆಗೆ ಈ ದಂಪತಿ ಆಸರೆಯಾಗಿದ್ದಾರೆ.

ಕಾವಾಡಿ ರಾಜು ಮತ್ತು ರಮ್ಯಾ ಎಂಬ ದಂಪತಿ 7 ತಿಂಗಳ ಹೆಣ್ಣು ಆನೆ ವೇದಾಳನ್ನ ಸ್ವಂತ ಮಗುತರ ಸಾಕಿ ಸಲಹುತ್ತಿದ್ದಾರೆ. ಅನಾಥ ಆನೆ ವೇದ ಅರೆಕ್ಷಣವು ರಾಜು ಹಾಗೂ ಆತನ ಪತ್ನಿಯನ್ನ ಬಿಟ್ಟಿರದು. ಎಲ್ಲಿ ಹೋದರೂ ಜೊತೆಗೇ ಹೋಗುತ್ತೆ. ಸದಾ ಸೀರೆಗೆ ಗಂಟಾಕಿಕೊಂಡಂತೆ ಅವರೊಂದಿಗೆಯೇ ಬದುಕುತ್ತಿದೆ. ವೇದ ಹುಟ್ಟಿದ 7 ದಿನಕ್ಕೆ ತಾಯಿಯಿಂದ ದೂರವಾಗಿದೆ. ಆಗಿನಿಂದಲು ಮರಿ ಹೆಣ್ಣಾನೆ ಪಾಲಿಗೆ ಕಾವಾಡಿ ದಂಪತಿಯೇ ತಂದೆ ತಾಯಿ. ವೇದಾಳನ್ನ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಕಾವಾಡಿ ರಾಜುರನ್ನ ನೋಡದೆ ಹೋದರೆ ಚಿಕ್ಕ ಮಕ್ಕಳಂತೆ ವೇದ ಗಲಾಟೆ ಮಾಡುತ್ತಾಳೆ. ಪ್ರತಿ ದಿನ 12 ಲೀಟರ್ ಹಾಲು ಕುಡಿಯುವ ವೇದ, ಕಾವಾಡಿ ದಂಪತಿಯ ಮುದ್ದು ಕೂಸಾಗಿದೆ. ದಂಪತಿಗಳ ನಿಸ್ವಾರ್ಥ ಸೇವೆಗೆ ಬಂಡಿಪುರ ಅರಣ್ಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮರಿಯಾನೆ ಪೋಷಣೆಗೆ ಬೇಕಾದ ಆರ್ಥಿಕ ಸಹಾಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ