Mysore
30
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಐವರು ಶಂಕಿತ ಉಗ್ರರ ಬಂಧನ: ಸಿಸಿಬಿಗೆ ಟ್ವೀಟ್ ಮೂಲಕ ಸಿಎಂ ಅಭಿನಂದನೆ

ಬೆಂಗಳೂರು: ನಗರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟವರು ಟ್ವೀಟ್​ ಮೂಲಕ ಅಭಿನಂದನೆಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು.

ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಸಿಬಿ ಪೊಲೀಸರ ಕಾರ್ಯವೈಖರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!