Mysore
14
broken clouds

Social Media

ಶನಿವಾರ, 31 ಜನವರಿ 2026
Light
Dark

ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ: ರಮ್ಯಾಗೆ ರಿಷಬ್ -ರಾಜ್ ಟಾಂಗ್!

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿನಿಮಾ ರಿಲೀಸ್ ಆಗುತ್ತಿದೆ. ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಸಂತಸ ಹೊರಹಾಕಿದ್ದಾರೆ.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಇಂದು  ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಇದ್ದ ವಿಘ್ನ ಗುರುವಾರ (ಜುಲೈ 20) ಕೊನೆಯಾಗಿತ್ತು. ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿನಿಮಾ ರಿಲೀಸ್ ಆಗುತ್ತಿದೆ.

ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಸಂತಸ ಹೊರಹಾಕಿದ್ದಾರೆ. ‘ನ್ಯಾಯ ಅಂದ್ರೆ ನ್ಯಾಯ ಜೈ ಆಂಜನೇಯ’ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಅವರು, ‘ಬನ್ನಿ ಬನ್ನಿ ಎಲ್ಲೆಲ್ಲಿ ಬೆಂಕಿ ಬೀಳುತ್ತೆ ನೋಡೋಣ’ ಎಂದಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದೆ.

ನಿತಿನ್​ ಕೃಷ್ಣಮೂರ್ತಿ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ‘ಪರಂವಾ ಪಿಕ್ಚರ್ಸ್​’ ಮೂಲಕ ಬಿಡುಗಡೆ ಮಾಡಲಿದ್ದಾರೆ.

ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ” ಎಂದು ಕೋರ್ಟ್ ಮೆಟ್ಟಿಲೇರಿದ್ದ ನಟಿ ರಮ್ಯಾ ಅವರಿಗೆ ಹಿನ್ನಡೆಯಾಗಿದೆ. ಚಿತ್ರ ಬಿಡುಗಡೆಗೆ ಎರಡು ದಿನ ಬಾಕಿ ಇರುವಾಗಲೇ ರಮ್ಯಾ ಅವರು ಕಾನೂನಿನ ಮೊರೆ ಹೋಗಿದ್ದರು. ಇದು ಚಿತ್ರತಂಡಕ್ಕೂ ಅಚ್ಚರಿ ಮೂಡಿಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!