Mysore
16
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಜು.27 ರ ಬಂದ್‌ ವಾಪಸ್‌ ಪಡೆದ ಖಾಸಗಿ ಸಾರಿಗೆ ಒಕ್ಕೂಟ: ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆ.10 ವರೆಗೆ ಗಡುವು

ಬೆಂಗಳೂರು : ಬೇಡಿಕೆ ಈಡೇರಿಕೆಯ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ ಹಿನ್ನೆಲೆ ಜುಲೈ 27 ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಖಾಸಗಿ ಸಾರಿಗೆ ಒಕ್ಕೂಟ ವಾಪಸ್ ಪಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಒಕ್ಕೂಟದ ಮುಖಂಡ ನಟರಾಜ ಶರ್ಮಾ, ನಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆಗಸ್ಟ್ 10ರ ವರೆಗೆ ಕಾಲಾವಕಾಶ ನೀಡಲಾಗಿದೆ. ಬೇಡಿಕೆ ಈಡೇರಿಸಿದ್ದರೆ ಮುಂದಿನ ನಡೆ ನಿರ್ಧರಿಸುತ್ತೇವೆ ಎಂದರು.

ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಜಾರಿ ನಂತರ ಖಾಸಗಿ ಬಸ್, ಆಟೋ ಟ್ಯಾಕ್ಸಿ ಮಾಲೀಕರಿಗೆ ಭಾರೀ ಹೊಡೆತ ನೀಡಿದೆ. ಹೀಗಾಗಿ ಯೋಜನೆ ಸ್ಥಗಿತಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಆಗ್ರಹಿಸುತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆಟೋ ಚಾಲಕರ ಸಮಸ್ಯೆ ಬೇರೆ ಇದೆ, ಟ್ಯಾಕ್ಸಿ ಸಮಸ್ಯೆಯೂ ಇದೆ. ಶಕ್ತಿಯೋಜನೆ ಕುರಿತು ನಾನೊಬ್ಬನೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಬೇಕು ಎಂದರು.

ಬಂದ್​ಗೆ ಕರೆ ನೀಡಿದ ಹಿನ್ನೆಲೆ ಇಂದು ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಭೆ ನಡೆಸಿದರು.

ಬೆಳಗ್ಗೆ ನಡೆದಿದ್ದ ಸಭೆಯಲ್ಲಿ ಒಮ್ಮತ ಮೂಡಿ ಬಾರದ ಹಿನ್ನೆಲೆ ಸಭೆ ವಿಫಲಗೊಂಡಿತ್ತು. ಹೀಗಾಗಿ ಮಧ್ಯಾಹ್ನದ ನಂತರ ಮತ್ತೆ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಒಕ್ಕೂಟಕ್ಕೆ ಬೇಡಿಕೆ ಈಡೇರಿಸುವ ಬಗ್ಗೆ ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ. ಹೀಗಾಗಿ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಂದ್ ವಾಪಸ್ ಪಡೆಯಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!