Mysore
24
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಮೋಟಾರು ರಹಿತ ವಾಹನಗಳಿಗೆ ಅನುವು ಮಾಡಿಕೊಡಲು ಸಾಧ್ಯವೇ ಇಲ್ಲ : ಎಡಿಜಿಪಿ ಅಲೋಕ್ ಕುಮಾರ್

ಮೈಸೂರು : ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಹಾಗೂ ಇತರ ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್‌ಪ್ರೆಸ್‌ ಹೆದ್ದಾರಿಯ ಅಪಘಾತದಲ್ಲಿ ಮೃತಪಟ್ಟ ಬಹುತೇಕರು ಬೈಕ್ ಸವಾರರು. 150 ಸಿಸಿ ವಾಹನಗಳಲ್ಲಿ ಹೆಚ್ಚು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆಟೋ ರಿಕ್ಷಾದಂತಹ ವಾಹನಗಳ ವೇಗ ಇನ್ನೂ ಕಡಿಮೆ ಇರುತ್ತದೆ. ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ನಿರ್ಬಂಧಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಿಂದೆಯೇ ಅವಕಾಶ ಮಾಡಿಕೊಂಡಿದೆ. ಈ ಸಂಬಂಧ ಜುಲೈ 12ರಂದು ಅಧಿಸೂಚನೆ ಕೂಡ ಹೊರಡಿಸಲಾಗಿದೆ. ಆಗಸ್ಟ್ 1ರಿಂದ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಹೆದ್ದಾರಿಯಲ್ಲಿ ಗ್ರಿಲ್, ವಿದ್ಯುತ್ ಕಂಬಗಳ ಕಳ್ಳತನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಎನ್‌ಎಚ್‌ಎಐ ಅಧಿಕಾರಿಗಳು ಒಂದೇ ಒಂದು ದೂರು ಕೊಟ್ಟಿಲ್ಲ. ತಡೆಗೋಡೆ ಕಬ್ಬಿಣ ಕಳ್ಳತನದಿಂದ ಹಸು, ಪಾದಚಾರಿಗಳು ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತ ಆಗುತ್ತಿವೆ ಎಂದು ಹೇಳುತ್ತಿದ್ದಾರೆ. ಆದರೆ ಪೊಲೀಸರಿಗೆ ದೂರು ಕೊಟ್ಟಿಲ್ಲ. ದರೋಡೆ ಪ್ರಕರಣಗಳ ವಿಚಾರವನ್ನೂ ನಮ್ಮ ಗಮನಕ್ಕೆ ತಂದಿಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!