Mysore
27
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆ ಪ್ರಾಂಶುಪಾಲ ಬಂಧನ

ಬೆಂಗಳೂರು :  ಖಾಸಗಿ ಶಾಲೆಯೊಂದರ ಪ್ರಾಂಶುಪಾಲ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ವೆಸಗಿರು ಘಟನೆ ವರ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಸಿದಂತೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ.

ಗುಂಜೂರಿನ ಪ್ರತಿಷ್ಠಿತ ಖಾಸಗಿ ಶಾಲೆಯ ಸಂಸ್ಥಾಪಕ ಹಾಗೂ ಪ್ರಾಂಶುಪಾಲ ಲ್ಯಾಬರ್ಡ್ ಪುಷ್ಪರಾಜ್ ನನ್ನು ಪೋಕ್ಸೋ ಕಾಯ್ದೆಯಡಿ ಬಂಸಲಾಗಿದೆ.

ನರ ದೌರ್ಬಲ್ಯದ 10 ವರ್ಷದ ವಿದ್ಯಾರ್ಥಿನಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ನಿನ್ನೆ ಬೆಳಗ್ಗೆ ಎಂದಿನಂತೆ 8.30ರ ಸುಮಾರಿಗೆ ಶಾಲೆಗೆ ಹೋದಾಗ ಆರೋಪಿ ಪ್ರಾಂಶುಪಾಲ ಖಾಲಿ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ನಂತರ ಆಕೆಗೆ ಕೇಕ್ ತಿನ್ನಿಸಿದ್ದಾನೆ.

ಮಧ್ಯಾಹ್ನ ಶಾಲೆ ಮುಗಿಸಿಕೊಂಡು 3.30ರ ಸುಮಾರಿಗೆ ವಿದ್ಯಾರ್ಥಿನಿ ಮನೆಗೆ ಹೋದಾಗ ಹೊಟ್ಟೆನೋವು ಕಾಣಿಸಿಕೊಂಡಿದ್ದು ತಾಯಿಗೆ ಹೇಳಿದ್ದಾಳೆ. ತಾಯಿ ಸ್ನಾನ ಮಾಡಿಸಿದ್ದಾಗ ವಿಷಯ ತಿಳಿದು ವಿಚಾರಿಸಿದಾಗ ಶಾಲೆಯಲ್ಲಿ ನಡೆದ ಘಟನೆಯನ್ನು ತಿಳಿಸಿದ್ದಾಳೆ.

ತಕ್ಷಣ ಮಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ. ನಂತರ ವಿದ್ಯಾರ್ಥಿನಿ ತಾಯಿ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲಿಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪ್ರಾಂಶುಪಾಲನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!