Mysore
28
light rain

Social Media

ಗುರುವಾರ, 06 ಆಗಸ್ಟ್ 2026
Light
Dark

ಕೆಆರ್‌ಎಸ್‌ ಡ್ಯಾಂ ನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರನ್ನು ಬಿಡಲಾಗಿದೆ.

ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜನಪ್ರತಿನಿಧಿಗಳು ತಿಳಿಸಿದ್ದಾರೆ. ಹೀಗಿರುವಾಗ ಕಾವೇರಿ ನೀರಾವರಿ ನಿಗಮ ತಮಿಳುನಾಡಿಗೆ ನೀರು ಹರಿಸಿದೆ.

ಮುಂಗಾರಿನ ಹಿನ್ನೆಲೆ ಕೆಲ ದಿನಗಳ ಹಿಂದೆ ಕೊಡಗಿನಲ್ಲಿ ಉತ್ತಮ ಮಳೆಯಾಗಿತ್ತು. ಹೀಗಾಗಿ ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟವೂ ಹೆಚ್ಚಿದೆ. ಈಗ ಮತ್ತೆ ಮಳೆ ಪ್ರಮಾಣ ತಗ್ಗಿದೆ. ಈಗಾಗಲೇ ಕೆಆರ್‌ಎಸ್‌ 113 ಅಡಿ ತುಂಬಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೂ 11 ಅಡಿಯಷ್ಟೇ ಬಾಕಿ ಇದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!