Mysore
25
light rain

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಮತ್ತೊಂದು ಅಪಘಾತ : ಐವರ ಸ್ಥಿತಿ ಗಂಭೀರ

ರಾಮನಗರ : ಹಾಲಿನ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಬಳಿ ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹಾಲಿನ ಲಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದ ರಸ್ತೆಗೆ ಕಾರು ಉರುಳಿದ್ದು, ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ನಿಯಂತ್ರಸಲು ಇತ್ತೀಚೆಗಷ್ಟೇ ಸ್ಪೀಡ್‌ ಡಿಟೆಕ್ಟರ್‌ ಅಳವಡಿಸಲಾಗಿದೆ. ವಾಹನಗಳಿಗೆ ವೇಗಮಿತಿ ನಿಗದಿಪಡಿಸುವ ಜೊತೆಗೆ ಬೈಕ್‌, ಆಟೋ ಟ್ರ್ಯಾಕ್ಟರ್‌ಗಳಿಗೆ ನಿಷೇಧ ಹೇರಲಾಗಿದೆ. ವಾಹನ ಸವಾರರೂ ಸಹ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!