Mysore
25
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ: 8ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ.

ಇಂದು (ಶುಕ್ರವಾರ) ಗುಣನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿ ಯಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟು ಗಾಯಗಳಾಗಿದ್ದು, ಬೆಂಕಿ ಅವಗಢ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಗಾಯಗೊಂಡ ಸಿಬ್ಬಂದಿಗಳನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!