Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು

ಕೊಡಗು : ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ, ಅಭ್ಯತ್​ ಮಂಗಲ, ಮಡಿಕೇರಿ ತಾಲೂಕಿನ ಹೊಸ್ಕೇರಿ, ಮುರಗೋಡ, ಕಟ್ಟೆಮಾಡು, ಅರೆಕಾಡು, ಗುಯ್ಯ, ಸಿದ್ದಾಪುರದ ಶಾಲೆಗಳಿಗೆ ಇಂದು ರಜೆ ಘೋಷಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಮಡಿಕೇರಿ ತಾಲೂಕಿನ ಅರೆಕಾಡು ಗ್ರಾಮದಲ್ಲಿ ನಿನ್ನೆ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾಗಿದ್ದರು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಧ್ಯಾಹ್ನದ ವೇಳೆ ದೇವಪ್ಪ ಕೆಲಸದ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಅರೆಕಾಡು ಗ್ರಾಮದ ಬಳಿ ತೆರಳಿದ್ದರು. ಈ ವೇಳೆ ಕಾಡಾನೆಯೊಂದು ದಾಳಿ ನಡೆಸಿದ್ದು ದೇವಪ್ಪ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನು ಈ ಘಟನೆ ನಡೆಯುವ ಮುನ್ನ ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದಿದ್ದ ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದರು. ಹೀಗಾಗಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆರೋಪ ಮಾಡಿದ್ದಾರೆ.

ಜನರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಾಚರಣೆ ನಡೆಸಿದ್ದಾರೆ. ಇದರಿಂದಾಗಿ ಟ್ರ್ಯಾಕ್ಟರ್ ಚಾಲಕನ ಮೇಲೆ ಕಾಡಾನೆ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದರು. ಸದ್ಯ ಈಗ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!