Mysore
25
scattered clouds

Social Media

ಬುಧವಾರ, 07 ಜನವರಿ 2026
Light
Dark

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ : 7 ಮಂದಿ ಸಾವು

ಶಿಮ್ಲಾ : ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 7 ಜನರು ಬಲಿಯಾಗಿರುವ ಘಟನೆ ನಡೆದಿದೆ.

ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ವರದಿಯಾಗಿದೆ.

ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ಹಾಗೂ ಬೆಂಬಲವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.

ಭಾರೀ ಮೆಳೆಯ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುಡ್ಡಗಾಡಿನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು. ಹಾನಿಯ ಕುರಿತು ಪ್ರತಿಕ್ರಿಯೆಗಾಗಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!