Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಜ್ಯದ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ಯೋಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.

ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ