Mysore
22
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಇಂದಿರಾ ಕ್ಯಾಂಟೀನ್‌ ಊಟದ ದರ ಏರಿಕೆ: ಸಂಪುಟ ಸಭೆ ನಿರ್ಧಾರ

ಬೆಂಗಳೂರು : ಇಂದಿರಾ ಕ್ಯಾಂಟೀನ್‌ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ ಸಭೆ ನಿರ್ಧರಿಸಲಾಗಿದೆ. ಇಂದಿರಾ ಕ್ಯಾಂಟೀನ್​ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆ ಮೂಲಕ ಗ್ರಾಹಕರಿಂದ 27 ರೂ. ಸಂಗ್ರಹಿಸಲಿದ್ದು, ಉಳಿದ 33 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ. ರಾಜ್ಯಾದ್ಯಂತ ನೂತನವಾಗಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್​​ಗಳಲ್ಲಿ ಈ ಹೊಸ ದರ ಇರಲಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್​ಗಳಲ್ಲಿ ಹಳೇ ದರ ಮುಂದುವರಿಕೆ ಆಗಲಿದೆ.

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್​​.ಕೆ.ಪಾಟೀಲ್​ ಹೇಳಿಕೆ ನೀಡಿದ್ದು, ಬಿಬಿಎಂಪಿ  ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್​ ತೆರೆಯಲು ಒಪ್ಪಿಗೆ ನೀಡಲಾಗಿದೆ. ಹೊಸ ಇಂದಿರಾ ಕ್ಯಾಂಟೀನ್​ಗೆ 27 ಕೋಟಿ ರೂ. ನೀಡಲು ಅನುಮೋದಿಸಲಾಗಿದೆ. ಸ್ಥಳೀಯ ತಿಂಡಿ ತಿನಿಸು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಇರಲಿದೆ ಎಂದು ಹೇಳಿದರು.

1 ರಿಂದ 9ನೇ ತರಗತಿವರೆಗೆ ಕಲಿಕಾ ಬಲವರ್ಧನೆಗೆ 78.13 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮ ಅನುಷ್ಠಾನಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ ಆವರಣದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ 27.88 ಕೋಟಿ ರೂ. ನೀಡಲು ಅನುಮೋದನೆ ನೀಡಲಾಗಿದೆ ಎಂದರು.

ಗದಗ ಮೆಡಿಕಲ್ ಕಾಲೇಜ್ ಆವರಣದಲ್ಲಿ 138 ಕೋಟಿ ರೂ. ವೆಚ್ಚದಲ್ಲಿ 450 ಬೆಡ್​​ಗಳ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದು, ಸಂಗಮ ಗ್ರಾಮವನ್ನು ಕೂಡಲಸಂಗಮ ಎಂದು ನಾಮಕರಣಕ್ಕೆ ಅನುಮೋದನೆ ನೀಡಲಾಗಿದೆ. ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಸುಪ್ರೀಂಕೋರ್ಟ್‌ಗೆ ಆ.21ರಂದು ವಸ್ತುಸ್ಥಿತಿ ಮನವಿ ಸಲ್ಲಿಕೆಗೆ ನಿರ್ಧರಿಸಲಾಗಿದೆ.

ಕಾನೂನು ಸಲಹೆಗಾರರಾಗಿ ನಿವೃತ್ತ ನ್ಯಾ.ನಾಗರತ್ನರನ್ನು ನೇಮಿಸಲು ಒಪ್ಪಿಗೆ ಸೂಚಿಸಿದ್ದು, ಗುತ್ತಿಗೆ ಆಧಾರದ ಮೇಲೆ ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಯಡಿ ಕಾನೂನು ಸಲಹೆಗಾರರಾಗ ನೇಮಿಸಲು ಸಂಪುಟ ಸಭೆ ಅನುಮೋದಿಸಿದೆ.

ಆರೋಪ ಸಾಬೀತಾದ ಹಿನ್ನೆಲೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಧೀನ ಕಾರ್ಯದರ್ಶಿ ಪಾಪಣ್ಣರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಹಿಂದಿನ ಸಂಪುಟ ಸಭೆಯಲ್ಲಿ ನಾಗಮಣಿಯನ್ನು ಅಮಾನತು ಮಾಡಿದ್ದೆವು. ಹಿಂದಿನ ಕೋರ್ಟ್ ಆದೇಶದ ಪ್ರಕಾರ ತಪ್ಪಿತಸ್ಥರಲ್ಲ ಅಂತಾ ವರದಿ ಸಿಕ್ಕಿದೆ ಎಂದು ಸಚಿವ ಹೆಚ್​​.ಕೆ.ಪಾಟೀಲ್​ ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ