ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಮೃತ ಮಹಿಳೆಯನ್ನು ಐಶಾ (62) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಮನೆಯ ಸಮೀಪ ವಾಯು ವಿಹಾರ ಮಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಅರಣ್ಯ ಸಚಿವರು ಆಗಮಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.





