Mysore
22
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಕೆ.ಆರ್.ಪೇಟೆ: ಚಿರತೆ ದಾಳಿಗೆ ಹಸು ಬಲಿ

ಕೆ.ಆರ್.ಪೇಟೆ : ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ತಾಲ್ಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.leopard

ತಾಲ್ಲೂಕಿನ ಕಸಬಾ ಹೋಬಳಿಯ ಬೊಮ್ಮೇನಹಳ್ಳಿ ಗ್ರಾಮದ ರೈತ ಪುಟ್ಟರಾಜು ಅವರಿಗೆ ಸೇರಿದ ಹಸುವಿನ ಕರುವನ್ನು ತಮ್ಮ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿತ್ತು. ಮಂಗಳವಾರ ತಡರಾತ್ರಿ ಚಿರತೆ ದಾಳಿ ಮಾಡಿ ಸುಮಾರು ೪೦ ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಕರುವನ್ನು ತಿಂದು ಹಾಕಿದೆ.

ಪುಟ್ಟರಾಜು ಮನೆಯ ಬೀದಿಯಲ್ಲಿ ರಾತ್ರಿ ವೇಳೆ ಸಂಚರಿಸಲು ಬೀದಿ ದೀಪದ ಕೊರತೆಯಿದ್ದು, ಕತ್ತಲು ಆವರಿಸಿದ ಕಾರಣ ಚಿರತೆ ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ಆ ಬೀದಿಗೆ ಬೀದಿದೀಪಗಳನ್ನು ಅಳವಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಚಿರತೆ ದಾಳಿಯಿಂದ ಭಯಭೀತರಾಗಿರುವ ಜನತೆ ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಯವರಿಗೆ ಮನವಿ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ