Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಉದಯನಿಧಿ ಸ್ಟಾಲಿನ್‌ ತಲೆ ತಂದವರಿಗೆ 10 ಕೋಟಿ ಬಹುಮಾನ : ಅಯೋಧ್ಯೆಯ ಹಿಂದೂ ಧರ್ಮದರ್ಶಿ

ಲಕ್ನೋ : ಅಯೋಧ್ಯೆಯ ಹಿಂದೂ ಧರ್ಮದರ್ಶಿಯೊಬ್ಬರು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಅವರ ಪುತ್ರ ಉದಯನಿಧಿಸ್ಟಾಲಿನ್‌ ತಲೆ ಕಡಿದು ತರುವಂತೆ 10 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.

ಅಯೋಧ್ಯೆಯ ಧರ್ಮದರ್ಶಿ ಪರಮಹಂಸ ಆಚಾರ್ಯ, ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದುಕೊಂಡು ಉದಯನಿಧಿ ಅವರ ಶಿರಚ್ಛೇದನವನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ವೀಡಿಯೊವನ್ನ ಬಿಡುಗಡೆ ಮಾಡಿದ್ದಾರೆ. ಪೋಸ್ಟರ್‌ಗೆ ಬೆಂಕಿ ಹಚ್ಚುವ ದೃಶ್ಯವನ್ನೂ ವೀಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಡಿಎಂಕೆ ಸಚಿವರ ತಲೆ ಕಡಿದು ತಂದವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉದಯನಿಧಿ ಸ್ಟಾಲಿನ್‌, ಸ್ವಾಮೀಜಿಯೊಬ್ಬರು ನನ್ನ ತಲೆಗೆ 10 ಕೋಟಿ ರೂ. ಬೆಲೆ ಕಟ್ಟಿದ್ದಾರೆ. ಅವರು ನಿಜವಾದ ಸಂತನೋ ಅಥವಾ ನಕಲಿ ಸಂತನೋ? ನನ್ನ ತಲೆಯನ್ನು ಏಕೆ ಅಷ್ಟು ಇಷ್ಟಪಡುತ್ತೀರಿ? ನಿಮಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ? ನನ್ನ ತಲೆ ಕೂದಲು ಬಾಚುವುದಕ್ಕೆ ಏಕೆ 10 ಕೋಟಿ ರೂ. ಘೋಷಣೆ ಮಾಡಿದ್ದೀರಿ? 10 ರೂಪಾತಿ ಬಾಚಣಿಗೆ ಕೊಟ್ಟರೆ ನಾನೇ ಬಾಚಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!