Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಕೇರಳದಲ್ಲಿ ನಿಫಾ ವೈರಸ್ ಆತಂಕ : ಕೊಡಗಿನಲ್ಲಿಯೂ ಕಟ್ಟೆಚ್ಚರ

ಮಡಿಕೇರಿ : ಕೇರಳದ ಕೆಲವೆಡೆ ನಿಫಾ ವೈರಸ್‌ ಪತ್ತೆಯಾಗಿರುವ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಎಚ್ಚರದಿಂದ ಇರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮನವಿ ಮಾಡಿದ್ದಾರೆ.

ಕೇರಳದ ವಿವಿಧ ಭಾಗಗಳಲ್ಲಿ 4 ಸಂಶಯಾಸ್ಪದ ನಿಫಾ ವೈರಸ್‌ ರೋಗದ ಪ್ರಕರಣಗಳು ಕಂಡು ಬಂದಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ಕೊಡಗಿನಲ್ಲಿಯೂ ಆತಂಕ ಸೃಷ್ಟಿಸಿದೆ.

ನಿಫಾ ವೈರಸ್‌ ಕಾಯಿಲೆ 1998 ಮತ್ತು 1999ನೇ ಇಸವಿಯಲ್ಲಿ, ಮಲೇಶಿಯಾ ಮತ್ತು ಸಿಂಗಪೂರ್‌ ದೇಶಗಳಲ್ಲಿನ ಮನೆಯಲ್ಲಿ ಸಾಕಿರುವ ಹಂದಿಗಳಲ್ಲಿ ಪತ್ತೆಯಾಗಿದ್ದು, ಮಲೇಶಿಯಾ ದೇಶದ ನಿಫಾ ಗ್ರಾಮದಲ್ಲಿ ಈ ವೈರಸ್‌ ಪ್ರಭೇದವನ್ನು ಪ್ರಪ್ರಥಮವಾಗಿ ಕಂಡು ಹಿಡಿಯಲಾಗಿದೆ.

ಮನೆಯಲ್ಲಿ ಸಾಕುವ ನಾಯಿ, ಬೆಕ್ಕು, ಮೇಕೆ, ಕುದುರೆ ಮತ್ತು ಕೆಲವು ಸಂದರ್ಭದಲ್ಲಿ ಕುರಿಗಳೂ ಸೋಂಕಿಗೆ ತುತ್ತಾಗುವ ಸಂಭವವಿದ್ದು, ಮಲೇಷಿಯಾ, ಸಿಂಗಪೂರ್‌, ಬಾಂಗ್ಲಾದೇಶ ಮತ್ತು ಭಾರತದಲ್ಲಿಈವರೆಗೆ 477 ಖಚಿತ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 248 ಸಾವುಗಳು ಸಂಭವಿಸಿದೆ.

2018 ರಲ್ಲಿ ಕೇರಳದಲ್ಲಿ 14 ಖಚಿತ ನಿಫಾ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 11 ಸಾವುಗಳು ಸಂಭಸಿದ್ದವು. 2021 ರಲ್ಲಿ ಕೇರಳದಲ್ಲಿ ಒಂದು ನಿಫಾ ವೈರಸ್‌ ರೋಗದ ಪ್ರಕರಣ ವರದಿಯಾಗಿತ್ತು. ಈಗ ಶಂಕಿತ ನಿಫಾ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರು ಎಚ್ಚರದಿಂದ ಆರೋಗ್ಯ ಇಲಾಖೆ ಸೂಚಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ