Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಪ್ರತಾಪ್ ಸಿಂಹ ಗಂಭೀರ ಆರೋಪ

 

ಮೈಸೂರು : ತಮಿಳುನಾಡಿಗೆ ಈಗಲೂ ಕದ್ದುಮುಚ್ವಿ ನೀರನ್ನು ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ಈಗಲೂ ಡ್ಯಾಂ ಗೆ ಹೋಗಿ ನೋಡಿ ಹೊರಹರಿವು ಪ್ರಮಾಣ ಪರೀಕ್ಷೆ ಮಾಡಿ.ಈ ವಿಚಾರವಾಗಿ ನಾನು ಚಾಲೆಂಜ್ ಮಾಡುತ್ತೇ‌ನೆ.ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಸೆ.13 ರಿಂದ ನೀರು ಹರಿಸಲಾಗುತ್ತಿದೆ.ನಾವು ಈ ವಿಚಾರವಾಗಿ ಹೋರಾಟ ಮಾಡುತ್ತೇವೆ.ಹೇಮಾವತಿ ಡ್ಯಾಂ ನಲ್ಲಿ 12 ಟಿಎಂಸಿ ಇದೆ.
ಹಾರಂಗಿ, ಕಬಿನಿ ಡ್ಯಾಂಗಳು ಬರಿದಾಗಿದೆ.
ಈಗಿರುವ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕು ನೀರು ಕೊಡಬಾರದು.ಕುಡಿಯುವ ನೀರಿನ ಉದ್ದೇಶಕ್ಕೆ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು ಎಂದು ಹೇಳಿದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ