ಬಾಲಿವುಡ್ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಜೋಡಿ ಮದುವೆ ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಸಿಖ್ ಪದ್ಧತಿಯಂತೆ ಪರಿಣಿತಿ-ರಾಘವ್ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸಂಜೆ 6:30ಕ್ಕೆ ಶುಭ ಮುಹೂರ್ತದಲ್ಲಿ ಹೊಸ ಬಾಳಿಗೆ ಈ ಜೋಡಿ ಕಾಲಿಟ್ಟಿದೆ. ಸ್ಟಾರ್ ಮದುವೆಗೆಂದು ಲೀಲಾ ಪ್ಯಾಲೇಸ್‌ನ್ನು ಭವ್ಯವಾಗಿ ಅಲಂಕರಿಸಲಾಗಿತ್ತು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಈ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪರಿಣಿತಿ ಮದುವೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ, ಮನೀಷ್ ಮಲ್ಹೋತ್ರಾ ಸೇರಿದಂತೆ ಹಲವರು ಭಾಗಿಯಾಗಿದ್ದರು. ಮೇ ತಿಂಗಳಿನಲ್ಲಿ ಈ ಜೋಡಿ ಎಂಗೇಜ್‌ಮೆಂಟ್ ಮಾಡಿಕೊಂಡಿತ್ತು.
ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾಗಿರುವ ನವಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ.