ಮಳವಳ್ಳಿ : ಬಸವನಬೆಟ್ಟದಲ್ಲಿ ಟೆಂಪೊ ಉರುಳಿ ಮೃತಪಟ್ಟ ಮಳವಳ್ಳಿ ತಾಲ್ಲೂಕು ತಮ್ಮಡಹಳ್ಳಿ ಗ್ರಾಮದ ಶೋಭ ರವರ ಮನೆಗೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಯವರು ಮಾಜಿ ಸಚಿವರು ಹಾಗೂ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಕೃಷಿ ಸಚಿವರು ವೈಯಕ್ತಿಕವಾಗಿ ಒಂದು ಲಕ್ಷ ಪರಿಹಾರ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಪೋಲೀಸ್ ವರಿಷ್ಠಾಧಿಕಾರಿ ಯತೀಶ್,ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಹಾಜರಿದ್ದರು.