Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಕೆಆರ್‌ಎಸ್ ಜಲಾಶಯದ ಒಳಹರಿವು ಹೆಚ್ಚಳ : 11.800 ಕ್ಯೂಸೆಕ್‌ ಏರಿಕೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಒಳಹರಿವು 11,800 ಕ್ಯೂಸೆಕ್‌ಗೆ ಏರಿಕೆಯಾಗಿದೆ.

ಸಾಕಷ್ಟು ಆತಂಕ ಮೂಡಿಸಿದ್ದ ಕೆಆರ್‌ಎಸ್‌ನ ನೀರಿನ ಮಟ್ಟ ಇದೀಗ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆ ಡ್ಯಾಂಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ನಿನ್ನೆ ಬೆಳಗ್ಗೆ 5,811 ಕ್ಯೂಸೆಕ್ ಇದ್ದ ಒಳ ಹರಿವು ಇಂದು ಬೆಳಗ್ಗೆ 11,800 ಕ್ಯೂಸೆಕ್ ಏರಿಕೆಯಾಗಿದೆ.

ಒಳ ಹರಿವು ಹೆಚ್ಚಳದಿಂದ ಮತ್ತೆ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 100 ಅಡಿ ಗಡಿ ತಲುಪಿದೆ. ಸದ್ಯ 99.50 ಅಡಿಗೆ ಕೆಆರ್‌ಎಸ್ ನೀರಿನ ಮಟ್ಟ ಏರಿಕೆಯಾಗಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ರೈತರಲ್ಲಿ ಸ್ವಲ್ಪ ಸಮಾಧಾನ ಮೂಡಿದೆ. ಮತ್ತೊಂದೆಡೆ ತಮಿಳುನಾಡಿಗೆ ನೀರು ಬಿಡುಗಡೆ ಮುಂದುವರಿಕೆಯಾಗಿದ್ದು, ಇಂದು 1,592 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋಗುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ