Mysore
32
overcast clouds

Social Media

ಮಂಗಳವಾರ, 16 ಜೂನ್ 2026
Light
Dark

ಕರ್ನಾಟಕದಲ್ಲಿ ರಾಕ್ಷಸರ ಆಡಳಿತ ನಡೆಯುತ್ತಿದೆ : ಪ್ರತಾಪ್ ಸಿಂಹ

ಮೈಸೂರು : ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬದಿಯಿಂದ ಬಂದು ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ ಎಂದು ಕಿಡಿಕಾರಿದರು.

ಆಡಳಿತದ ಚುಕ್ಕಾಣಿ ಹಿಡಿದವರ ಮನಸ್ಥಿತಿಯಂತೆ ಉಳಿದವರು ಇರುತ್ತಾರೆ. ಸಿದ್ದರಾಮಯ್ಯ ಎಲ್ಲಾ ನೋಡಿಕೊಂಡು ಕಣ್ಮುಚ್ಚಿ ಕುಳಿತಿದ್ದಾರೆ. ಪಿಎಫ್ಐ, ಕೆಎಫ್-ಡಿ ಸಂಘಟನೆ ಸದಸ್ಯರ ಮೇಲಿನ ಕೇಸ್ ವಾಪಸ್ ಪಡೆದ ಕಾರಣ ಇವತ್ತು ವಿಕೃತಿಗಳು ವಿಜೃಂಭಿಸುತ್ತಿವೆ. ಇದಕ್ಕೆ ಸಿದ್ದರಾಮಯ್ಯ ಕಾರಣ, ಅವರು ಬಿಗಿಯಾಗಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!