Mysore
18
clear sky

Social Media

ಶನಿವಾರ, 03 ಜನವರಿ 2026
Light
Dark

ರಾಹುಲ್‌ ಗಾಂಧಿಯನ್ನು ರಾವಣನಂತೆ ಬಿಂಬಿಸಿ ಪೋಸ್ಟರ್‌ ಬಿಡುಗಡೆ : ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಬಿಡುಗಡೆ ಗೊಳಿಸಿದ ಪೋಸ್ಟರ್ ಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿಯ ವರ್ತನೆ ಖಂಡಿಸಿ, ಶನಿವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಬಿಜೆಪಿ ಪಕ್ಷ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ‌ಬಗ್ಗೆ ಧರ್ಮವಿರೋಧಿತನದ ಪೋಸ್ಟರ್‌ಗಳನ್ನು ಬಳಸಿದ್ದಾರೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.

ಬಿಜೆಪಿ ನಡೆಯನ್ನು ಖಂಡಿಸಿ,‌ ಶನಿವಾರ ಮಧ್ಯಾಹ್ನ 12 ಗಂಟೆಗೆ‌ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.‌ ಈ ಪ್ರತಿಭಟನೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ, ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಚಿವರುಗಳು, ಸಂಸದರು, ಶಾಸಕರುಗಳು, ಮಾಜಿ ಶಾಸಕರುಗಳು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿದ ಪೋಸ್ಟರ್ ವಿವಾದ ಸೃಷ್ಟಿಸಿದೆ. ಪೋಸ್ಟರ್ ನಲ್ಲಿ ನವಯುಗದ ರಾವಣ ಎಂದು ಬಿಜೆಪಿ ಬಿಂಬಿಸಿದೆ.. ಈ ವಿವಾದಾತ್ಮಕ ಪೋಸ್ಟರ್‌ನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಈ ಟ್ವೀಟ್ ಈಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!