ಬೆಂಗಳೂರು : ಇಸ್ರೇಲ್-ಹಮಾಸ್ ಯುದ್ಧವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಕರ್ನಾಟಕ ಮುಖ್ಯಮಂತ್ರಿ ಕಾರ್ಯಾಲಯ ವಿನಂತಿಸಿದೆ.
“ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸೂಚನೆಗಳು ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ. ದಯವಿಟ್ಟು ಹೆಚ್ಚಿನ ಜಾಗರೂಕತೆಯನ್ನು ವಹಿಸುತ್ತಾ, ಅನಗತ್ಯ ಪ್ರಯಾಣಗಳನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ ಹತ್ತಿರ ಇರಬೇಕಾಗಿ ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ https:// www.org.il/en ಅಥವಾ ಅವರ ಸಿದ್ಧತೆ ಕರಪತ್ರವನ್ನು ನೋಡಿ. ತುರ್ತು ಸಂದರ್ಭದಲ್ಲಿ ಮೊಬೈಲ್ ನಂಬರ್ 97235226748 ಸಂಪರ್ಕಿಸಿ ಅಥವಾ consl. telaviv@mea.gov.in ನಲ್ಲಿ ಇ- ಮೇಲ್ ಸಂದೇಶ ಕಳುಹಿಸಿ, ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸಂಪರ್ಕಿಸಿ ಎಂದು ತಿಳಿಸಲಾಗಿದೆ.
ಇಸ್ರೇಲ್‌ನಲ್ಲಿರುವ ತನ್ನ ನಾಗರಿಕರ ಸುರಕ್ಷತೆಗಾಗಿ ವಿದೇಶಾಂಗ ವ್ಯವಹಾರಗಳ ಸಚಿವರೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸುತ್ತಿರುವುದಾಗಿ ಸಿಎಂ ಕಚೇರಿ ಎಕ್ಸ್ ಖಾತೆಯಲ್ಲಿ ವಿವರಿಸಲಾಗಿದೆ.