Mysore
23
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಮೈಸೂರು ದಸರಾ ಮಹೋತ್ಸವ : ಜಿಲ್ಲಾಡಳಿತದಿಂದ ಮುಖ್ಯಮಂತ್ರಿಗಳಿಗೆ ಆಹ್ವಾನ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕೃತವಾಗಿ ಆಹ್ವಾನಿಸಿದರು.

ಬುಧವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು.

ಈ ವೇಳೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!