Mysore
18
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ರಾಜ್ಯ ಸರ್ಕಾರ ಗುತ್ತಿಗೆದಾರರಿಂದ ಲೂಟಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ : ಬಿ.ವೈ ವಿಜಯೇಂದ್ರ

ರಾಯಚೂರು : ಮಂತ್ರಿಗಳ ನೇತೃತ್ವದಲ್ಲಿ ಗುತ್ತಿದಾರರು ಮತ್ತು ಇತರ ಮೂಲಗಳಿಂದ ಲೂಡಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಯಚೂರಿನ ಲಿಂಗಸುಗೂರಿನಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ಶರನ್ನವರಾತ್ರಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದಿದೆ. ಆದರೆ ಈವರೆಗೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕಿಡಿ ಕಾರಿದ್ದಾರೆ.

ಎಲ್ಲರೂ ಗ್ಯಾರಂಟಿ ಕಡೆಗೆ ತೋರಿಸುತ್ತಿದ್ದಾರೆ. ವಿದ್ಯುತ್ ಸಮಸ್ಯೆಯಿಂದ ರೈತರು ಪರದಾಡುತ್ತಿದ್ದಾರೆ, ಬರಗಾಲ ಪರಸ್ಥಿತಿಯಿದೆ. ರಾಜ್ಯ ಸರ್ಕಾರ ಎಚ್ಚೆತ್ತು ಹೊರರಾಜ್ಯದಿಂದ ವಿದ್ಯುತ್ ಖರೀದಿ ಮಾಡಿ ರೈತರಿಗೆ ಸ್ಪಂದಿಸಬೇಕು. ಆದ್ರೆ ಇದು ರೈತರ ಬಗ್ಗೆ ಕಾಳಜಿಯಿಲ್ಲದ ಸರ್ಕಾರ, ಬರಗಾಲದಲ್ಲೂ ಅದೇ ರೀತಿ ಮುಂದುವರಿದಿರುವುದು ದುರದೃಷ್ಟ. ಬರಗಾಲದ ಸಂದರ್ಭದಲ್ಲೂ ಮಂತ್ರಿಗಳಿಗೆ ಹೊಸ ಕಾರು ಖರೀದಿ ಮಾಡುತ್ತಿದ್ದಾರೆ. ರಾಜ್ಯದ ಜನ ನರಳಾಡುತ್ತಿರುವಾಗ ಸರ್ಕಾರದ ಇಂತಹ ವರ್ತನೆ ಖಂಡನೀಯವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಕಾರ್ಯಕರ್ತರ ಶಕ್ತಿಯ ಮೇಲೆ ನಿಂತಿರುವ ಪಕ್ಷ. ಯಾರೋ ಒಬ್ಬರು ಇಬ್ಬರು ನಾಯಕರು ಪಕ್ಷ ಬಿಟ್ಟು ಹೋದರೆ ಹಿನ್ನಡೆಯಾಗಲ್ಲ. ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ, ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಗೆಲ್ಲುವ‌ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಐಟಿ ದಾಳಿಯಾದಾಗ ನೂರಾರು ಕೋಟಿ ರೂಪಾಯಿ ಹಣ ಸೀಜ್ ಮಾಡಿದ್ದಾರೆ. ಸಿಎಂ‌, ಡಿಸಿಎಂ ದಾಳಿಯನ್ನ ರಾಜಕೀಯ ಪ್ರೇರಿತ ಅಂತ ಹೇಳಿದ್ದಾರೆ. ಇದು ಸಿಎಂ ಸ್ವಾಗತ ಮಾಡಬೇಕಾದ ವಿಚಾರ. ಒಂದು ಕಡೆ ಕೊಳ್ಳೆಹೊಡೆಯುತ್ತಿರುವಂತ ಸರ್ಕಾರ ಇದು ಅಂತ ಜನರೇ ಮಾತನಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ