Mysore
20
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್ ಕಾರು ಅಪಘಾತ

ಡೆಹ್ರಾಡೂನ್ : ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರು ಮಂಗಳವಾರ ತಡರಾತ್ರಿ ಅಪಘಾತಕ್ಕೀಡಾಗಿದೆ. ರಾವತ್ ಅವರು ಹಲ್ದ್ವಾನಿಯಿಂದ ಉಧಮ್ ಸಿಂಗ್ ನಗರದ ಕಾಶಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಪ್ರಾಥಮಿಕ ತಪಾಸಣೆ ಮತ್ತು ಚಿಕಿತ್ಸೆಯ ನಂತರ ರಾವತ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹಲ್ದ್ವಾನಿಯಿಂದ ಕಾಶಿಪುರ್‍ಗೆ ಪ್ರಯಾಣಿಸುವಾಗ, ನನ್ನ ಕಾರು ಬಾಜ್ಪುರದಲ್ಲಿ ಡಿವೈಡರ್‍ಗೆ ಡಿಕ್ಕಿ ಹೊಡೆಯಿತು. ಇದರಿಂದ ನನಗೆ ಸಣ್ಣ ಪ್ರಮಾಣದ ಗಾಯಾಗಳಾಗಿದ್ದು, ನಾನು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡ ಬಳಿಕ ವೈದ್ಯರು ಎಲ್ಲವನ್ನೂ ಖಚಿತಪಡಿಸಿ ನನ್ನನ್ನು ಅಸ್ಪತ್ರೆಯಿಂದ ಬಿಡುಗಡೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರೀಶ್ ರಾವತ್ ಬರೆದಿದ್ದಾರೆ.

ನನ್ನ ಅಪಘಾತದ ಬಗ್ಗೆ ಸಾಮಾಜಿಕ ಮಾಧ್ಯಮದ ಪೋಸ್ಟ್ಗ್‍ಳನ್ನು ನೋಡಿದ ನಂತರ ಕೆಲವರು ಕಳವಳ ವ್ಯಕ್ತಪಡಿಸಬಹುದು. ಚಿಂತಿಸಬೇಕಾಗಿಲ್ಲ, ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಮತ್ತು ನನ್ನ ಸಹವರ್ತಿಗಳು ಸಹ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಕ್ಸ್‍ನಲ್ಲಿ ಬರೆದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!