Mysore
24
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ನವೆಂಬರ್ 1ರ ನಂತರ ಚರ್ಚೆಗೆ ದಿನ ಹಾಗೂ ಸಮಯ ನಿಗದಿ ಮಾಡಿ: ಡಿ.ಕೆ ಶಿವಕುಮಾರ್

ಬೆಂಗಳೂರು: ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಉಂಟಾಗಿರುವ ರಾಜಕೀಯ ಕದನ ಇಬ್ಬರು ಪ್ರಮುಖ ನಾಯಕರ ಮಾತಿನ ಯುದ್ಧಕ್ಕೆ ಕಾರಣವಾಗಿದೆ. ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಗೆ ಸವಾಲು ಹಾಕಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್, ನಾನು ಚರ್ಚೆಗೆ ಬರಲು ಸಿದ್ಧನಿದ್ದು, ದಿನ ಹಾಗೂ ಸಮಯ ನಿಗದಿ ಮಾಡಿ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದಿಗೋಷ್ಠಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅವರು ಏನೋ ಹೇಳೋದು ನಾನು ಏನೋ ಹೇಳೋದು. ಗಾಳಿಯಲ್ಲಿ ಗುಂಡು ಹೊಡೆಯೋದೆಲ್ಲ ಬೇಡ. ಅವರು ಚರ್ಚೆಗೆ ಟೈಮ್ ಫಿಕ್ಸ್ ಮಾಡಲಿ. ನವೆಂಬರ್‌ 1ರ ನಂತರ ಯಾವಾಗ ಬೇಕಾದರು ಫಿಕ್ಸ್‌ ಮಾಡಲಿ. ನಾನು ಚರ್ಚೆಗೆ ಸಿದ್ಧನಿದ್ದೇನೆ, ಏನು ಉತ್ತರ ಕೊಡಬೇಕೋ ಅಲ್ಲೇ ಕೊಡ್ತೀನಿ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!