Mysore
30
overcast clouds

Social Media

ಮಂಗಳವಾರ, 11 ಆಗಸ್ಟ್ 2026
Light
Dark

ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕೆ ನಷ್ಟ : ರಾಜ್ಯ ಸರ್ಕಾರದಿಂದ ಪ್ರಚಾರಾಂದೋಲನ

ಬೆಂಗಳೂರು : ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕಾಗುತ್ತಿರುವ ನಷ್ಟದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಚಾರಾಂದೋಲನ ನಡೆಸುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಕನ್ನಡದ ನೆಲ, ಜಲ, ಭಾಷೆಗೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಅಭಿಯಾನಕ್ಕೆ ಸುದ್ದಿ ಮಾಧ್ಯಮ, ವೃತ್ತ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಲಾಗಿದೆ.

ಸಾಮಾಜಿಕ ಜಾಲತಾಣ ಅಭಿಯಾನದ ಮುಂದಿನ ಭಾಗವಾಗಿ ಇಂದು ಅಂತರ್‌ ರಾಜ್ಯ ನೀರು ಹಂಚಿಕೆಗೆ ಸಂಬಂಸಿದ ಕುಡಿಯುವ ನೀರು, ಕೃಷಿ ಮತ್ತು ವಿದ್ಯುತ್ ಉತ್ಪಾದನೆಯ ಉದ್ದೇಶದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ, ಅನುದಾನ ಮತ್ತು ಪ್ರಾಶಸ್ತ್ಯ ನೀಡದೆ, ಬರದ ನಡುವೆ ಕನ್ನಡಿಗರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿರುವ ಬಗ್ಗೆ ಧ್ವನಿಯೆತ್ತಲಾಗುವುದು ಎಂದು ತಿಳಿಸಲಾಗಿದೆ.

ಕಾವೇರಿ ನೀರು ಹಂಚಿಕೆಯಲ್ಲಿ ಉಂಟಾಗಿರುವ ಸಮಸ್ಯೆಯ ಬಗ್ಗೆ ಪ್ರಧಾನಿ ಮೋದಿ ಅವರ ಮೌನ, ಮೇಕೆದಾಟು ಯೋಜನೆಗೆ ಸಿಗದ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಘೋಷಿಸಲಾದ ಅನುದಾನ ಬಜೆಟ್ ಪುಸ್ತಕಕ್ಕಷ್ಟೇ ಸೀಮಿತವಾಗಿರುವುದು ಹೀಗೆ ಕೇಂದ್ರದ ಅಸಹಕಾರದಿಂದಾಗಿ ಕರುನಾಡು ಬಡವಾಗುತ್ತಿರುವ ಬಗ್ಗೆ ನ್ಯಾಯಕ್ಕಾಗಿ ಆಗ್ರಹಿಸಲಾಗುವುದು. ಜನರ ಪರವಾದ ಈ ಕೂಗಿಗೆ ತಮ್ಮೆಲ್ಲರ ಬೆಂಬಲವಿರಲಿ ಎಂದು ಮನವಿ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!