Mysore
23
scattered clouds

Social Media

ಶನಿವಾರ, 25 ಏಪ್ರಿಲ 2026
Light
Dark

ಮಹಿಳಾ ಪೊಲೀಸ್ ಪೇದೆಗೆ ಠಾಣೆಯಲ್ಲಿ ಸೀಮಂತ

ಮಂಡ್ಯ : ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡಿ ಬೀಳ್ಕೊಟ್ಟ ಘಟನೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ.

ಪೋಲಿಸ್ ಇನ್ಸ್ ಪೆಕ್ಟರ್ ಸುಮಾರಾಣಿಯವರು ಶಾರದಾ ಮತ್ತು ಅಸ್ಮಬಾನು ಎಂಬ ಇಬ್ಬರು ಗರ್ಭಿಣಿ ಮಹಿಳಾ ಪೇದೆಗಳಿಗೆ ಸೀಮಂತ ಮಾಡಿ ಮಡಿಲಿಗೆ ಮಡಿಲಕ್ಕಿ ತುಂಬಿ ಶುಭ ಹಾರೈಸಿದ್ದಾರೆ.

ಠಾಣಾ ಸಿಬ್ಬಂದಿಗಳು ಇಬ್ಬರು ಮಹಿಳಾ ಪೇದೆಗಳಿಗೆ ಉಡಿ ತುಂಬಿ, ಮಡಿಲಕ್ಕಿ ಹಾಕಿ, ಕೊಬ್ಬರಿ ಬೆಲ್ಲ, ತೆಂಗಿನಕಾಯಿ, ಅರಿಶಿಣ-ಕುಂಕುಮ ಹಾಗೂ ಬಳೆಗಳನ್ನು ನೀಡಿ ಸೀಮಂತ ಕಾರ್ಯ ಮಾಡಿದ್ದಾರೆ. ಆ ಮೂಲಕ ಇಬ್ಬರು ಮಹಿಳಾ ಪೇದೆಗಳನ್ನ ಗೌರವಿಸಿ ಬೀಳ್ಕೊಟ್ಟಿದ್ದಾರೆ.

ಕೆ.ಆರ್.ಪೇಟೆ ಪಟ್ಟಣದ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!